ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಇಲಾಖೆಯಲ್ಲಿ ಬರೋಬ್ಬರಿ 210 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.
ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ.
ಕೃಷಿ ಯಂತ್ರ ಖರೀದಿಯಲ್ಲಿ ನಡೆದಿರುವ ಗೋಲ್ ಮಾಲ್ ಕುರಿತಾಗಿ ಕೃಷ್ಣಮೂರ್ತಿ ದೂರಿನ ಜೊತೆಗೆ ಹಲವು ದಾಖಲೆಗಳನ್ನು ಕೂಡ ಎಸಿಬಿಗೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಕೊನೆಗೂ ಸಿಕ್ಕಿಬಿದ್ದ 7ನೇ ಆರೋಪಿ
ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ; ಸಿಎಂ ತಂದೆ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ