ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಬಿ.ಸಿ.ಪಾಟೀಲ್ ಅವರ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (41) ಆತ್ಮಹತ್ಯೆಗೆ ಶರಣಾದವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿ ಅರಣ್ಯ ಪ್ರದೇಶದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರಕೆರಾ ಬಳಿ ಕಾಡಂಚಿನಲ್ಲಿ ರಸ್ತೆ ಬಳಿ ಕಾರು ನಿಲ್ಲಿಸಿ ವಿಷ ಸೇವೇಸಿ ಅಸ್ವಸ್ಥರಾಗಿದ್ದ ಪ್ರತಾಪ್ ಕುಮಾರ್ ಅವರನ್ನು ಸ್ಥಳಿಯರ್ಯಾರೋ ಕಂಡು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಕುಮಾರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಯಾವ ಕಾರಣಕ್ಕೆ ಮಾಜಿ ಸಚಿವರ ಅಳಿಯ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂಬ ಬಗ್ಗೆ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟ ತಿಳಿಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ