Karnataka News

*ಮನೆಯಲ್ಲಿಯೇ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು.

Related Articles

ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕುಡಿಯಲು ನೀರ್ ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ ಕವನಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Home add -Advt

Related Articles

Back to top button