Kannada NewsKarnataka NewsLatest

*ಬಿ.ಕಾಂ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಓರ್ವ ಆರೋಪಿ ಬಂಧನ*

ಮೂವರು ಆರೋಪಿಗಳಿಗಾಗಿ ಮುಂದುವರೆದ ಶೋಧ


ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಆಕೆಯ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಓರ್ವ ಆರೋಪಿಯನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

Home add -Advt

ನವೀನ್ ಕುಮಾರ್ ಬಂಧಿತ ಆರೋಪಿ. ಈತ ಯುವತಿಯ ಸ್ನೇಹಿತನೇ ಆಗಿದ್ದಾನೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಮಹಮ್ಮದ್ ಸಾಕಿಬ್, ತನುಗೌಡ ಹಾಗೂ ನಾಲ್ಕನೇ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಲ್ಲಾ ಆರೋಪಿಗಳು ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿಗಳು ಎನ್ನಲಾಗಿದೆ.

ಬಳ್ಳಾರಿ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಗೆ ಕರೆದ ಕಾಮುಕರು ಆಕೆಯನ್ನು ಕಿಡ್ನ್ಯಾಪ್ ಮಾಡಿ ಆಟೋದಲ್ಲಿ ಕೊಳ್ಳಕ್ಕೆ ಕರೆದೊಯ್ದಿದ್ದರು. ಬಳಿಕ ಆಕೆಗೆ ಬಲವಂತದಿಂದ ಬೀಯರ್ ಕುಡಿಸಿ ಹೋಟೆಲೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳ್ಳಾರಿ ಮಹಿಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಧ್ಯ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರಿಗಾಗಿ ಹುಡುಕಾಟ ನಡೆಸಲಾಗಿದೆ.


Related Articles

Back to top button