
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬಿ.ದಯಾನಂದ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ಇತ್ತೀಚೆಗೆ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಇದೀಗ ಐವರು ಐಪಿಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಬಿ.ದಯಾನಂದ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಲಾಗಿದೆ. ಬಿ.ದಯಾನಂದ್ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.
ಶೇಖರ್ ಹೆಚ್.ಟಿ.ಅವರನ್ನು ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ ಪಿ ಆಗಿ ನೇಮಕ ಮಾಡಲಾಗಿದೆ. ಒಟ್ಟು ಐವರು ಅಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಲಾಗಿದೆ.