
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿ.ಎಡ್.ಪದವಿ ಪ್ರವೇಶ ನೋಂದಣಿ ಅವಧಿಯನ್ನು ಬರುವ ಡಿ.11 ರ ವರೆಗೆ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರ ಪ್ರಸ್ತಾಪಕ್ಕೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತರಿಸಿದರು.
ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾಗಿದೆ. ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯವಾಗುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ಗಮನಿಸಿ, ರಾಜ್ಯ ಸರಕಾರವು ಬಿ.ಎಡ್.ಪದವಿ ಪ್ರವೇಶ ನೋಂದಣಿ ಅವಧಿಯನ್ನು ಡಿ.11 ರ ವರೆಗೆ ವಿಸ್ತರಿಸಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ