
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರೇ ಭಿನ್ನಾಭಿಪ್ರಯ ವ್ಯಕ್ತಪಡಿಸಿರುವಾಗ ಎಂಎಲ್ ಸಿ ಬಿಕೆ.ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿದ್ದರೆ ಬೀಳಲಿ. ಜಾತಿಗಣತಿ ಜಾರಿಯಾಗಲೇಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಯಾಕೆ ಮೀನಾಮೆಷ ಎಣಿಸುತ್ತಿದೆ? ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಜಾತಿಗಣತಿಯಿಂದ ಎಲ್ಲಾ ಸಮುದಾಯಗಳಿಗೂ ಅನುಕೂಲವಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೇ ಆಗಲಿ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ