Kannada NewsKarnataka NewsLatestPolitics

*ಅರ್ಹತೆ ಇದ್ದರೂ ಪರಮೇಶ್ವರ್ ಅವರನ್ನು ಸಿಎಂ ಮಾಡಿಲ್ಲ; ಸ್ವಪಕ್ಷದ ವಿರುದ್ಧವೂ ಹರಿಹಾಯ್ದ ಬಿ.ಕೆ.ಹರಿಪ್ರಸಾದ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಹರಿಪ್ರಸಾದ್, ಡಾ.ಜಿಪರಮೇಶ್ವರ್ ಅವರನ್ನು ಸಿಎಂ ಇರಲಿ ಡಿಸಿಎಂ ಸ್ಥಾನದಿಂದಲು ಡಿಪ್ರಮೋಟ್ ಮಾಡಲಾಯ್ತು ಎಂದು ಕಿಡಿಕಾರಿದ್ದಾರೆ.

ಸಮಾನ ಮನಸ್ಕರರ ಸಭೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಅತಿ ಹೆಚ್ಚು ಅವಧಿಗೆ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಪರಮೇಶ್ವರ್ ಅವರನ್ನು ಸಿಎಂ ಮಾಡಲು ಅವರಿಗೆ ಎಲ್ಲ ರೀತಿಯ ಅರ್ಹತೆ ಇತ್ತು. ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದಲೂ ಡಿಪ್ರಮೋಟ್ ಮಾಡಿದರು ಎಂದು ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.

ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ. ಈಗಲೂ ಸರ್ಕಾರದಲ್ಲಿ ದಲಿತರನ್ನು ಉಪಮುಖ್ಯಮಂತ್ರಿ ಮಾಡಬಹುದಿತ್ತು. ಸತೀಶ್ ಜಾರಕಿಹೊಳಿಯನ್ನು ಉಪಮುಖ್ಯಮಂತ್ರಿ ಮಾಡಬಹುದಿತ್ತು. ಆದರೂ ಮಾಡಿಲ್ಲ ಎಂದು ಹೇಳಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button