Latest

*ವಿವಾದ ಸೃಷ್ಟಿಸಿದ ಬಿ.ಕೆ.ಹರಿಪ್ರಸಾದ್ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಹೊಸಪೇಟೆ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಚರ್ಚೆಗೆ ಗ್ರಾಸರಾಗುತ್ತಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಶಾಸಕರ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ. ಈಗಿರುವ ಬಿಜೆಪಿ ಸರ್ಕಾರ ಬಹುಮತದಿಂದಾಗಿ ಅಧಿಕಾರಕ್ಕೆ ಬಂದಿಲ್ಲ, ಆಪರೇಶನ್ ಕಮಲದ ಮೂಲಕ ರಚನೆಯಾಗಿದೆ. ಕೆಲ ಶಾಸಕರು ಸ್ಥಾನ ಮಾರಿಕೊಂಡು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಕಾರಣರಾದರು ಎಂದು ಗುಡುಗಿದ್ದಾರೆ.

ಕರ್ನಾಟಕವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದ ಕೀರ್ತಿ ಬಿಜೆಪಿಯದ್ದು. ಪ್ರಧಾನಿ ಮೋದಿಯವರು ಒಬ್ಬ ಸುಳ್ಳಿನ ಸರದಾರ ಎಂದು ವಾಗ್ದಾಳಿ ನಡೆಸಿದ್ದಾರೆ. ವಲಸಿಗ ಶಾಸಕರ ವಿರುದ್ಧ ವಾಗ್ದಳಿ ನಡೆಸುವ ಬರದಲ್ಲಿ ಮಹಿಳೆಯರಿಗೆ ಬಿ.ಕೆ.ಹರಿಪ್ರಸಾದ್ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರಿಷತ್ ವಿಪಕ್ಷ ನಾಯಕನ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

*ಭಯಾನಕ ಘಟನೆ: ಕಾರು ಚಾಲಕನನ್ನು 1ಕೀ.ಮಿ ನಡುರಸ್ತೆಯಲ್ಲಿ ಎಳೆದೊಯ್ದ ಬೈಕ್ ಸವಾರ*

Home add -Advt

https://pragati.taskdun.com/bike-rideraccident-casebangaloremagadi-road/

Related Articles

Back to top button