Belagavi NewsBelgaum NewsKannada NewsKarnataka NewsLatest

*ಬಿ.ಕೆ. ಮಾಡೆಲ್ ಪ್ರೌಢಶಾಲೆಯ ಶತಮಾನೋತ್ಸವ: ಭವ್ಯ ಪ್ರಭಾತ ಫೇರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ಥಳೀಯ ಬೆಳಗಾವಿ ಎಜುಕೇಶನ್ ಸೊಸೈಟಿಯ ಬಿ.ಕೆ. ಮಾಡೆಲ್ ಪ್ರೌಢಶಾಲೆಯ ಶತಮಾನೋತ್ಸವದ ಸಂಭ್ರಮಕ್ಕೆ ಶುಕ್ರವಾರ ಅದ್ಧೂರಿ ಚಾಲನೆ ದೊರೆತಿದ್ದು, ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ಪ್ರಭಾತ ಫೇರಿ’ಗೆ ಸಾರ್ವಜನಿಕರಿಂದ ಹಾಗೂ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಾಲೆಯ ಹಾಲಿ-ಮಾಜಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಈ ಶಿಸ್ತುಬದ್ಧ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಗರದಲ್ಲಿ ಚಳಿ ಇದ್ದಾಗ್ಯೂ ಪ್ರಭಾತ ಫೇರಿಯಲ್ಲಿ ನೂರಾರು ಜನರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಕ್ಯಾಂಪ್ ಪ್ರದೇಶದ ಬಿ.ಕೆ. ಮಾಡೆಲ್ ಶಾಲಾ ಮೈದಾನದಲ್ಲಿ ಪ್ರಾರ್ಥನೆಯೊಂದಿಗೆ ಆರಂಭವಾದ ಮೆರವಣಿಗೆಯಲ್ಲಿ ಉಷಾತಾಯಿ ಗೋಗಟೆ ಹೆಣ್ಣು ಮಕ್ಕಳ ಪ್ರೌಢಶಾಲೆ, ಎನ್.ಎಸ್. ಪೈ ಪ್ರಾಥಮಿಕ ಶಾಲೆ, ವಾಸುದೇವ ಘೋಟಗೆ ಮಾಡೆಲ್ ಇಂಗ್ಲಿಷ್ ಮೀಡಿಯಂ ಶಾಲೆ, ವಿಠ್ಠಲಾಚಾರ್ಯ ಶಿವಣಗಿ ಪ್ರಾಥಮಿಕ ಶಾಲೆ, ಮಾಡೆಲ್ ಸೈನ್ಸ್ ಅಂಡ್ ಕಾಮರ್ಸ್ ಪದವಿ ಪೂರ್ವ ಕಾಲೇಜು ಹಾಗೂ ಶ್ರೀದೇವಿ ದಾಸಪ್ಪ ಶಾನಭಾಗ ಮಾಡೆಲ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅಂಬಾ ಭವನ, ಪಾಟೀಲ ಗಲ್ಲಿ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿದ ಮೆರವಣಿಗೆಯು ಪುನಃ ಶಾಲಾ ಮೈದಾನದಲ್ಲಿ ಮುಕ್ತಾಯವಾಯಿತು.

ನಾಳೆ ಮಾಜಿ ವಿದ್ಯಾರ್ಥಿಗಳ ಸಮಾವೇಶ ಶತಮಾನೋತ್ಸವದ ಮೂರನೇ ದಿನವಾದ ಭಾನುವಾರ (ಡಿಸೆಂಬರ್ 21) ಸಂಜೆ 5:30ಕ್ಕೆ ಮಾಜಿ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಸಚಿವರು ಪ್ರಲ್ಹಾದ ಜೋಶಿ, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ, ಲಿಂಗರಾಜ ಕಾಲೇಜಿನ ನಿವೃತ್ತ ಪ್ರಾಚಾರ್ಯ ಬಸವರಾಜ ಜಗಜಂಪಿ, ಜಯಂತ ದೇಶಪಾಂಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಭಾನುವಾರದ ಈ ವಿಶೇಷ ಕಾರ್ಯಕ್ರಮವು ಕೇವಲ ಶಾಲೆಯ ಮಾಜಿ ವಿದ್ಯಾರ್ಥಿಗಳಿಗಷ್ಟೇ ಸೀಮಿತವಾಗಿರುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Home add -Advt

Related Articles

Back to top button