Kannada NewsKarnataka NewsLatestPolitics

*ಬಿಜೆಪಿಯಿಂದ ಮತದಾನ ಜಾಗೃತಿ ಅಭಿಯಾನ; ಸಭೆಗೆ ಗೈರಾದ ಶಾಸಕ ಸೋಮಶೇಖರ್, ಹೆಬ್ಬಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮತದಾರರ ಜಾಗೃತಿ ಅಭಿಯಾನ ಸಭೆ ನಡೆಸಿದೆ. ಆದರೆ ಸಭೆಗೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳ ಸಭೆ ನಡೆಯಿತು. ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಶಂಕರ ಪಾಟೀಲ್ ಮುನೇನಕೊಪ್ಪ, ವಿ.ಸೋಮಣ್ಣ ಗೈರಾಗಿದ್ದಾರೆ.

ಆಪರೇಷನ್ ಹಸ್ತ ವಿಚಾರ ರಾಅಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿದ್ದು, ಬಿಜೆಪಿ ಹಲವು ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸೋಮಶೇಖರ್ ಹಾಗೂ ಶಿವರಾಅಮ್ ಹೆಬ್ಬಾರ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಬಿಜೆಪಿ ಸಭೆಗೆ ಸೋಮಶೇಖರ್, ಹೆಬ್ಬಾರ್, ಮುನೇನಕೊಪ್ಪ, ಸೋಮಣ್ಣ ಗೈರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button