ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿಯಾದ ಬಿ.ಎಲ್. ಸಂತೋಷ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನ ಧವಳಗಿರಿ ನಿವಾಸಕ್ಕೆ ಆಗಮಿಸಿದ್ದ ಬಿ.ಎಲ್.ಸಂತೋಷ್ ಸುಮಾರು 15 – 20 ನಿಮಿಷಗಳ ಕಾಲ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿನ್ನೆ ಹೇಳಿಕೆ ನೀಡಿದ ಬೆನ್ನಲ್ಲೇ ಬಿ.ಎಲ್ ಸಂತೋಷ್ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಸಂಪುಟ ವಿಸ್ತರಣೆ ಬಗ್ಗೆ ಹಲವು ಕುತೂಹಲವನ್ನು ಕೆರಳಿಸಿದೆ.

ಉಪಚುನಾವಣೆಯಲ್ಲಿ ಗೆದ್ದ ಯಾವೆಲ್ಲಾ ಶಾಸಕರಿಗೆ ಸಚಿವ ಸ್ಥಾನ ನೀದಬೇಕು? ಪಕ್ಷ ನಿಷ್ಠರಲ್ಲಿ ಎಷ್ಟು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಸೋತವರಿಗೂ ಅವಕಾಶ ಕೊಡಬೇಕೇ ಬೇಡವೇ ಎಂಬ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂತೋಷ್ ಭೇಟಿ ಕುತೂಹಲ ಕೆರಳಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button