ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಟಿ ಆರ್ ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿ.ಎಲ್.ಸಂತೋಷ್ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 21ರೊಳಗೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ತೆಲಂಗಾಣದಲ್ಲಿ ಬಿಜೆಪಿ ನಡೆಸಿದ ಆಪರೇಷನ್ ಕಮಲದ ವಿಚಾರಣೆಯನ್ನು ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತೆಲಂಗಾಣ ಪೊಲೀಸರು ನಡೆಸಬಹುದು ಎಂದು ಹೈಕೋರ್ಟ್ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಈ ವಿದ್ಯಮಾನ ನಡೆದಿದೆ.
ಟಿ ಆರ್ ಎಸ್ ಶಾಸಕರಿಗೆ 100 ಕೋಟಿ ರೂಪಾಯಿ ಆಮಿಷವೊಡ್ಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಅ.26ರಂದು ಹೈದರಾಬಾದ್ ಬಳಿಯ ಮೊಯಿನಾಬಾದ್ ಫಾರ್ಮ್ ಹೌಸ್ ನಲ್ಲಿ ತೆಲಂಗಾಣ ಪೊಲೀಸರು ಬಂಧಿಸಿದ್ದರು. ಆಪರೇಷನ್ ಕಮಲದ ಬಗ್ಗೆ ಶಾಸಕರು ಹಾಗೂ ಪುರೋಹಿತರೊಬ್ಬರ ನಡುವೆ ನಡೆದಿದ್ದ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಇದರಲ್ಲಿ ಬಿ.ಎಲ್.ಸಂತೋಷ್ ಹೆಸರು ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬಿ.ಎಲ್.ಸಂತೋಷ್ ಅವರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವತೆ ಸೂಚಿಸಿದ್ದಾರೆ.
ಚಿಲುಮೆ ಕಚೇರಿಯಲ್ಲಿ ಸಚಿವರಿಗೆ ಸೇರಿದ ಚೆಕ್ ಪತ್ತೆ; ಆ ಸಚಿವರು ಯಾರು?
https://pragati.taskdun.com/voter-id-scamchilume-ngopolice-raid/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ