
ಪ್ರಗತಿವಾಹಿನಿ ಸುದ್ದಿ; ಹುಕ್ಕೇರಿ : ಬೆಳಗಾವಿ ಶಿವಬಸವ ನಗರದಲ್ಲಿರುವ ಸಚಿವ ದಿ ಉಮೇಶ ಕತ್ತಿ ಅವರ ನಿವಾಸಕ್ಕೆ ಸೋಮವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸುನೀಲ ಕುಮಾರ ಸುರಾನಾ ಭೇಟಿ ನೀಡಿ ದಿ.ಉಮೇಶ ಕತ್ತಿ ಅವರ ಭಾವ ಚಿತ್ರಕ್ಕೆ ನಮನ ಸಲ್ಲಿಸಿದರು.
ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹೋದರ ರಮೇಶ ಕತ್ತಿ ಹಾಗೂ ಪುತ್ರ ನಿಖಿಲ ಕತ್ತಿ ಮತ್ತು ಕುಟುಂಬದ ಸದಸ್ಯರಿಗೆ ಅವರು ಸ್ವಾಂತನ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ, ಮಾತನಾಡಿ ಸಚಿವ ದಿ. ಉಮೇಶ ಕತ್ತಿ ಅವರು ಉತ್ತರ ಕರ್ನಾಟದ ಅಭಿವೃದ್ದಿಗೋಸ್ಕರ ನೇರವಾಗಿ ಮಾತನಾಡುವ ಮೂಲಕ ರಾಜ್ಯದ ಗಮನ ಸೆಳೆಯುತ್ತಿದ್ದ ವ್ಯೆಕ್ತಿ. ಅವರ ಅಗಲಿಕೆ ನಮ್ಮೆಲ್ಲರಿಗೂ ಕಾಡುತ್ತಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ, ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಸತ್ಯಪ್ಪಾ ನಾಯಿಕ, ಪುರಸಭೆ ಅಧ್ಯಕ್ಷ ಎಕೆ ಪಾಟೀಲ, ಬಿಜೆಪಿ ಮಂಡಲದ ಅಧ್ಯಕ್ಷ ರಾಚಯ್ಯಾ ಹಿರೇಮಠ, ಗುರು ಕುಲಕರ್ಣಿ, ಮತ್ತಿತರರು ಉಪಸ್ಥಿತರಿದ್ದರು.
ಗೃಹ ಸಚಿವರ ಜಿಲ್ಲೆಯಲ್ಲಿಯೇ ಸ್ಥಾಪನೆಯಾಗಲಿದೆ ವಿಧಿವಿಜ್ಞಾನ ಪ್ರಯೋಗಾಲ
https://pragati.taskdun.com/latest/fsl-labshivamoggaaraga-jnanendra/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ