Latest

ಬಿಜೆಪಿ ನಾಯಕರಿಗೆ ತಲ್ಲಣ ಮೂಡಿಸಿದ ಬಿ.ಎಲ್.ಸಂತೋಷ್ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆ ಇದೀಗ ರಾಜ್ಯ ಬಿಜೆಪಿ ನಾಯಕರ ದಿಗಿಲಿಗೆ ಕಾರಣವಾಗಿದೆ.

ಮೈಸೂರಿನಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರು, ಪಾಲಿಕೆ ಸದಸ್ಯರನ್ನು ಹೊರಗಿಟ್ಟು ಮುಂಬರುವ ಚುನಾವಣೆ ಎದುರಿಸಲಾಗುವುದು. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳಿದರು.

ಈ ಬಗ್ಗೆ ಉದಾಹರಣೆ ಸಮೇತ ವಿವರಿಸಿದ ಬಿ.ಎಲ್.ಸಂತೋಷ್, ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ಕೊಟ್ಟಿಲ್ಲ, ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿಗೊಳಿಸಿದ್ದೇವೆ. ಅಲ್ಲೆಲ್ಲ ಹೊಸ ಕಾರ್ಯಕರ್ತರಿಗೆ ಅವಕಾಶ ನೀಡಿ ಅಧಿಕಾರಕ್ಕೇರಿದ್ದೇವೆ. ಹಾಗೆಯೇ ಇಲ್ಲಿಯೂ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುತ್ತದೆ. ಹಾಗಂತ ಬಿಜೆಪಿ ನಾಯಕರು ಹೆದರುವುದು ಬೇಡ ಎಂದರು. ಆದರೆ ಇಂತಹ ಬದಲಾವಣೆ ಪ್ರಯೋಗ ಬಿಜೆಪಿಯಲ್ಲಿ ಮಾತ್ರ ನಡೆಯುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡಿರಬೇಕು ಎಂದು ಹೇಳಿದ್ದಾರೆ.

ಒಟ್ಟಾರೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಬಿ.ಎಲ್.ಸಂತೋಷ್ ನೀಡಿದ ಈ ಒಂದು ಹೇಳಿಕೆ ಬಿಜೆಪಿ ನಾಯಕರಲ್ಲಿ ತಲ್ಲಣ ಮೂಡಿಸಿದೆ. ಹಾಲಿ ಶಾಸಕರು, ಕುಟುಂಬ ರಾಜಕಾರಣಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಿಲ್ಲವೇ ಎಂಬ ಕುತೂಹಲ ಮೂಡುತ್ತಿದೆ.
ಮಸೀದಿಗಳ ಮೈಕ್ ತೆರವುಗೊಳಿಸದ ಸರ್ಕಾರ; ಮೇ.9ರಂದು ದೇವಾಲಯಗಳ ಮೇಲೆ ಭಜನೆ, ಮಂತ್ರಘೋಷ ಆರಂಭ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button