Kannada NewsKarnataka NewsPolitics

*ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕನಿಂದಲೇ ಲಂಚದ ಆರೋಪ: ಕಾಂಗ್ರೆಸ್ ವಿರುದ್ಧ ಪ್ರಹಾರಕ್ಕೆ ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಲಂಚದ ಆರೋಪ ಮಾಡಿದ್ದು, ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಜೊತೆ ಈ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ಪ್ರಹಾರಕ್ಕೆ ಬಿಜೆಪಿ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಮಾಡಿದ್ದಾರೆ.

Home add -Advt

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು. ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದಿದ್ದಾರೆ.

ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಒತ್ತಾಯಿಸಿದ್ದಾರೆ.

Related Articles

Back to top button