
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.
1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು. ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡುವಲ್ಲಿ ಹಗಲಿರುಳು ಎನ್ನದೇ ದಣಿಯದೆ ದುಡಿದು ಲಕ್ಷಾಂತರ ಬಡ ವಿದ್ಯಾರ್ಥಿಗಳ ಬಾಳಿನಲ್ಲಿ ವಿದ್ಯೆಯ ಕಿಡಿ ಹಚ್ಚಿದ್ದರು.
ಅವರಿಗೆ ಪತ್ನಿ, 4 ಗಂಡು, 2 ಹೆಣ್ಣು ಮಕ್ಕಳಿದ್ದಾರೆ.
2 ದಿನ ಏನೇನು ಲಾಕ್? ಇಲ್ಲಿದೆ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ