
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದೆ.
ಪ್ರಕರಣ ಸಂಬಂಧ ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಫೆ.28ರಂದು ತ್ವರಿತ ನ್ಯಾಯಾಲಯ ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಐ ಅರುಣ್ ಅವರಿದ್ದ ಪೀಠ, ಕಾಗ್ನಿಜೆನ್ಸ್ ಪಡೆದು ಸಮನ್ಸ್ ನೀಡಿದ ಕ್ರಮ ರದ್ದುಪಡಿಸಲು ನಿರಾಕರಿಸಿದೆ.


