
ಪ್ರಗತಿವಾಹಿನಿ ಸುದ್ದಿ; ಅಥಣಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ನಡೆದಿದೆ.
ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬೆಂಬಲಿಗರು ಯಡಿಯೂರಪ್ಪ ಮೋಸಗಾರ ಎಂದು ಧಿಕ್ಕಾರ ಕೂಗಿದ್ದಾರೆ.
ಯಡಿಯೂರಪ್ಪನವರು ಒಂದಲ್ಲ ಇನ್ನೂ ಹತ್ತು ಬಾರಿ ಅಥಣಿಗೆ ಬಂದರೂ ಲಕ್ಷ್ಮಣ ಸವದಿ ಗೆಲ್ಲುತ್ತಾರೆ. ಯಡಿಯೂರಪ್ಪ ಮೋಸಗಾರ ಎಂದು ಕಾಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ