Latest

ವಿಜಯೇಂದ್ರ ಸ್ಪರ್ಧೆ ವಿಚಾರ; ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿ.ವೈ.ವಿಜಯೇಂದ್ರ ಚುನವಾಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್ಯಡಿಯೂರಪ್ಪ, ಸದ್ಯಕ್ಕೆ ವಿಜಯೇಂದ್ರ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನ ಸುತ್ತುರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿಜಯೇಂದ್ರ ಯಾವುದೇ ಉಪಚುನಾವಣೆಗಳಲ್ಲಿ ಸ್ಪರ್ಧಿಸುತ್ತಿಲ್ಲ. ಮುಂದೆ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಇದೇ ವೇಳೆ ದೇವಾಲಯಗಳ ತೆರವು ವಿಚಾರವಾಗಿ ಗರಂ ಆದ ಬಿಎಸ್ ವೈ, ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ, ತೆರವುಗೊಳಿಸುವ ಮುನ್ನ ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಮುಂದಿನ ದಿನಗಳಲ್ಲಿ ದೇವಾಲಯ ತೆರವಿನಂತಹ ನಿರ್ಧಾರವನ್ನು ಕೈಗೊಳ್ಳಬಾರದು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

ಪೊಲೀಸ್ ತಿದ್ದುಪಡಿ ವಿಧೇಯಕ ಮಂಡನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button