Latest

ವಿಧಾನಸಭಾ ಚುನಾವಣೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಎಲ್ಲಿಂದ ಸ್ಪರ್ಧೆ ಮಾಡಿದರೂ ಗೆದ್ದು ಬರುತ್ತಾರೆ. ವಿಜಯೇಂದ್ರ ಯುವಕನಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾನೆ. ಬರುವ ದಿನಗಳಲ್ಲಿ ಜನರ ಆಶಿರ್ವಾದ ಬೆಂಬಲ ಆತನಿಗೆ ಸಿಗಲಿದೆ. ಭವಿಷ್ಯದಲ್ಲಿ ಬೆಳೆಯುತ್ತಾನೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ವಾಯುವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವಿಧರರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪರಿಷತ್ ನಲ್ಲಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ. ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮೂರು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು.
ರೆಪೋ ದರ ಹೆಚ್ಚಿಸಿದ RBI

Home add -Advt

Related Articles

Back to top button