Kannada NewsLatest

ಬೆಳಗಾವಿ: ಸೋಲಿನ ಬಗ್ಗೆ ವರದಿ ತರಿಸಿ ತನಿಖೆ; ಬಳಿಕ ಮುಂದಿನ ಕ್ರಮ ಎಂದ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಬೆಳಗಾವಿ ಹಾಗೂ ಮೈಸೂರಿನಲ್ಲಿ ಪರಿಷತ್ ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಬೆಳಗಾವಿಯಲ್ಲಿ ಸೋಲಿನ ಬಗ್ಗೆ ಸುದೀರ್ಘ ಚರ್ಚೆಯಾಗಲಿದೆ. ಹೆಚ್ಚು ಮಂದಿ ಶಾಸಕರು, ಸಂಸದರು ಇದ್ದರೂ ಗೆಲ್ಲಲು ಸಾಧ್ಯವಾಗಿಲ್ಲ. ಎಲ್ಲಿ ಏನಾಗಿದೆ ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇನ್ನು ಉತ್ತರ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ ಎರಡು ದಿನ ವಿಶೇಷ ಚರ್ಚೆ ನಡೆಸಬೇಕು ಎಂದು ಸ್ಪೀಕರ್ ಗೆ ಮನವಿ ಮಾಡಿದ್ದೇನೆ. ಇದಕ್ಕೆ ಸಿಎಂ ಸಹಮತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಪರಿಷತ್ ಚುನಾವಣೆಗೂ 4 ದಿನ ಮೊದಲು ರಾಜಕೀಯ ಬೆಳವಣಿಗೆ; ಎಲ್ಲವನ್ನೂ ಹೇಳ್ತೀನಿ ಎಂದ ರಮೇಶ್ ಜಾರಕಿಹೊಳಿ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button