Latest

*BJP ಟಿಕೆಟ್ ಆಕಾಂಕ್ಷಿಗಳಲ್ಲಿ ಶುರುವಾಯ್ತು ಎದೆಬಡಿತ; ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎಂದ ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯನಾಯಕರು, ಕೇಂದ್ರ ನಾಯಕರು ಸರಣಿ ಸಭೆ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಾಸದಲ್ಲಿ ನಡೆಯುತ್ತಿರುವ ಸಭೆಗೂ ಮುನ್ನ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Home add -Advt

170ರಿಂದ 180 ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆಯೊಳಗಾಗಿ ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿ ಪಟ್ಟಿ ಬಿಡುಗಡೆಗೂ ಮುನ್ನ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.

https://pragati.taskdun.com/d-k-shivakumarreactionr-ashokvidhanasabh-election/

Related Articles

Back to top button