Uncategorized

*ವಿಪಕ್ಷ ನಾಯಕರು ಮಾತ್ರವಲ್ಲ ರಾಜ್ಯಾಧ್ಯಕ್ಷರ ಹೆಸರೂ ಇಂದೇ ಘೋಷಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಮಂಡಲ ಅಧಿವೇಶ ಆರಂಭವಾಗಿದ್ದರೂ ವಿಪಕ್ಷ ಬಿಜೆಪಿ ಇನ್ನೂ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ನಾಯಕರನ್ನು ಘೋಷಣೆ ಮಾಡದಿರುವುದು ಆಡಳಿತ ಪಕ್ಷ ಕಾಂಗ್ರೆಸ್ ವಾಕ್ಸಮರಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ.

ಈ ಮಧ್ಯೆ ಇಂದು ವಿಪಕ್ಷ ನಾಯಕರು ಹಾಗೂ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಆಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಇಂದು ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ಘೋಷಣೆಯೂ ಆಗಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಕೇಂದ್ರದ ನಾಯಕರು ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಅಭಿಪ್ರಾಯ ಪಡೆದು ಹೋಗಿದ್ದಾರೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ, ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸಿ ತೀರ್ಮಾನಕ್ಕೆ ಬರಬಹುದು. ಅವರು ಕೈಗೊಳ್ಳುವ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button