ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಈ ಬಾರಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ, ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಲಿದೆ. ಅಧಿವೇಶನ ಮುಗಿಯುವ 2-3 ದಿನಗಳಲ್ಲಿ ಕಾಯ್ದೆ ಜಾರಿಯಾಗಲಿದೆ ಎಂದು ಹೇಳಿದರು.
ಕಾಯ್ದೆ ಜಾರಿ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್ ವಿರೋಧ ಇದ್ದೆ ಇದೆ. ವಿಪಕ್ಷ ವಿರೋಧ ಮಾಡುವುದು ಸಹಜ ಎಂದು ಹೇಳಿದರು.
6 ತಿಂಗಳಿಗೊಂದು ಕಾಯ್ದೆ; ಸರ್ಕಾರದ ವಿರುದ್ಧ ಸತೀಶ ಜಾರಕಿಹೊಳಿ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ