ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.
ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಮರು ವಿಚಾರಣೆಗೆ ಕಳೆದ ವಾರ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಇಂದು ನಡೆದ ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಹಾಗೂ ನವೆಂಬರ್ 2ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗೆ ನ್ಯಾಯಾಲಯ ಆದೇಶ ನೀಡಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯಶ್ರೀ, ಚಂದ್ರಕಾಂತ ರಾಮಲಿಮ್ಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಾಗಿತ್ತು.
ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಮೃತದೇಹ ಪತ್ತೆ
https://pragati.taskdun.com/latest/mothersondeadbody-foundbengalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ