Latest

ಮಾಜಿ ಸಿಎಂ ಬಿ.ಎಸ್.ವೈಗೆ ಮತ್ತೆ ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಹಾಗೂ ಕುಟುಂಬದ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.

ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಪೂರ್ವಾನುಮತಿ ಸಿಗದ ಕಾರಣ ಈ ಹಿಂದೆ ಇದೇ ಪ್ರಕರಣ ವಜಾಗೊಂಡಿತ್ತು. ಆದರೆ ಈಗ ಹೈಕೋರ್ಟ್ ಪ್ರಕರಣದ ವಜಾ ಆದೇಶ ರದ್ದು ಪಡಿಸಿ ಮರು ವಿಚಾರಣೆಗೆ ಆದೇಶ ಹೊರಡಿಸಿದೆ.

Related Articles

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ , ಚಂದ್ರಕಾಂತ್ ರಾಮಲಿಂಗಮ್, ಎಸ್.ಟಿ ಸೋಮಶೇಖರ್, ಡಾ.ಜಿ ಪ್ರಕಾಶ್ , ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಟಿ.ಜೆ.ಅಬ್ರಾಹಂ ಎಂಬುವವರು ಭ್ರಷ್ಟಾಚಾರ ಪ್ರಕರಣ ದಾಖಲಿಸಿದ್ದರು. ಕೇಸ್ ದಾಖಲಿಸಿದ್ದರು.

ಇತ್ತೀಚೆಗೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಪೂರ್ವಾನುಮತಿ ನಿರಾಕರಿಸಿದ್ದರಿಂದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಟಿ.ಜೆ.ಅಬ್ರಾಹಂ ಹೈಕೋರ್ಟ್ ಮೆಟ್ಟಿಲೇರಿದ್ದರು.

HAL ನಿಂದ ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್

https://pragati.taskdun.com/latest/umesh-kattidead-bodyair-liftbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button