Latest

ಡಿ.ಕೆ.ಶಿವಕುಮಾರ್ ವಿರುದ್ಧ ಎಸಿಬಿಗೆ ದೂರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 13 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಲಂ ಪಾಷ ಎಸಿಬಿಗೆ ದೂರು ನೀಡಿದ್ದಾರೆ.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು 13 ನಾಯಕರ ವಿರುದ್ಧ ದೂರು ದಾಖಲಿಸಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರೇ ಆದ ವಿ.ಎಸ್.ಉಗ್ರಪ್ಪ, ಸಲೀಂ ಸಂಭಾಷಣೆ ವೇಳೆ ಡಿಕೆಶಿ ಕಲೆಕ್ಷನ್ ಗಿರಾಕಿ ವಿಚಾರದ ಚರ್ಚೆ ಆಧಾರವಾಗಿಟ್ಟುಕೊಂಡು ಎಸಿಬಿಗೆ ದೂರು ನೀಡಲಾಗಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಸಲೀಂ ಹಾಗೂ ಉಗ್ರಪ್ಪ ನಡೆಸಿರುವ ಸಂಭಾಷಣೆ ಆಡಿಯೋ ಇಟ್ಟುಕೊಂಡು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಆಲಂ ಪಾಷ ಎಸಿಬಿಗೆ ಒತ್ತಾಯಿಸಿದ್ದಾರೆ.

ಅಲ್ಲದೇ ಡಿ.ಕೆ.ಶಿವಕುಮಾರ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವರಾಗಿದ್ದಾಗಲೂ 8-12 ಪರ್ಸಂಟೇಜ್ ಕಮಿಷನ್ ಪಡೆದುಕೊಂಡ ಬಗ್ಗೆ ಆರೋಪ ಕೇಳಿಬಂದಿತ್ತು. ಇನ್ನು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವೂ ಅಕ್ರಮ ಸಂಪಾದನೆ, ನೀರಾವರಿ ಇಲಕಹೆಯಲ್ಲಿ ಗೋಲ್ ಮಾಲ್ ಸೇರಿದಂತೆ ಹಲವು ಆರೋಪಗಳಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಲಂ ಪಾಷಾ ಎಸಿಬಿಗೆ ದೂರು ನೀಡಿದ್ದಾರೆ.
ಉಪಚುನಾವಣೆ ಪ್ರಚಾರದ ನಡುವೆ ಹೇಗಿದೆ ನೋಡಿ ಸಿದ್ದರಾಮಯ್ಯ ಜಿಮ್ ವರ್ಕೌಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button