Latest

ಡಾ.ಸೌಂದರ್ಯ ಆತ್ಮಹತ್ಯೆ; ಮರಣೋತ್ತರ ಪರೀಕ್ಷಾ ವರದಿ ಹೇಳುವುದೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯನ್ನು ವೈದ್ಯರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಬೆಂಗಳೂರಿನ ವಸಂತನಗರದ ಫ್ಲ್ಯಾಟ್ ನಲ್ಲಿ ಇಂದು ಬೆಳಿಗ್ಗೆ ಫ್ಯಾನಿಗೆ ವೇಲ್ ನಿಂದ ನೇಣುಬಿಗಿದುಕೊಂಡು ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಮಾಜಿ ಸಿಎಂ ಮೊಮ್ಮಗಳು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುದು ರಾಜ್ಯಾದ್ಯಂತ ತಲ್ಲಣಮೂಡಿಸಿದೆ.

ಈ ನಡುವೆ ಬೌರಿಂಗ್ ಆಸ್ಪತ್ರೆಯಲ್ಲಿ ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿಯನ್ನು ಬೆಂಗಳೂರು ಉತ್ತರ ತಾಲೂಕಿನ ತಹಶೀಲ್ದಾರ್ ಗೆ ಹಸ್ತಾಂತರಿಸಲಾಗಿದೆ.

ಈ ಕುರಿತು ಡಾ.ಸತೀಶ್ ಮಾಹಿತಿ ನೀಡಿದ್ದು, ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಸಿದ್ಧವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೂವರು ವೈದ್ಯರು ಹಾಗೂ ತಹಶೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ವಿಡಿಯೋ ಚಿತ್ರಣ ಮಾಡಲಾಗಿದೆ. ಡಾ.ಸೌಂದರ್ಯ ಅವರ ಕತ್ತಿನಲ್ಲಿ ಮಾತ್ರ ಮಾರ್ಕ್ ಇದ್ದು, ಬೇರೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳೇ ವಿವರಿಸಲಿದ್ದಾರೆ ಎಂದು ತಿಳಿಸಿದರು.

Home add -Advt

ಇನ್ನು ಡಾ.ಸೌಂದರ್ಯ ಅವರ ಪಾರ್ಥಿವಶರೀರವನ್ನು ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದ್ದು, ಸಂಜೆ ಪತಿ ಡಾ.ನೀರಜ್ ಅವರ ಅಬ್ಬಿಗೆರೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆಗೆ ಕಾರಣವೇನು?; 9 ತಿಂಗಳ ಮಗುವನ್ನು ಬಿಟ್ಟು ಹೊಗುವಂತಾದ್ದೇನಾಯಿತು?

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button