Latest

*ಮಾಜಿ ಸಿಎಂ ಯಡಿಯೂರಪ್ಪ, ಸಚಿವರು ಸೇರಿದಂತೆ 28 ಜನರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಬರೋಬ್ಬರಿ 821.22 ಕೋಟಿ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು, ಐಎ ಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ.

ಆರ್ ಟಿಐ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಲೋಕಾಯುಕ್ತದಲ್ಲಿ ದೂರು ನೀಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ 28 ಜನರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿಯಿಂದಲು ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ. ಆಂಬುಲೆನ್ಸ್ ಖರೀದಿ ನೆಪದಲ್ಲಿ ಹೆಚ್ಚಿನ ವಾಹನ ಸಂಖ್ಯೆ ತೋರಿಸಿ ಲೂಟಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

https://pragati.taskdun.com/d-k-shivakumarreactionbajarangadala-ban/


Related Articles

Back to top button