ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನೋಟಿಸ್ ಜಾರಿಯಾಗಿದೆ. ಇದರ ಬೆನ್ನಲ್ಲೇ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ.
ತಾನು ಯಾವುದೇ ಕಾನೂನುಬಾಹಿರ ಕೃತ್ಯವೆಸಗಿಲ್ಲ. ಫಿರ್ಯಾದಿ ಮಹಿಳೆ ತನ್ನ ವಿರುದ್ಧ ದೂರು ನೀಡಿರುವುದು ಹಾಸ್ಯಾಸ್ಪದ. ಎಫ್ ಐ ಆರ್ ದಾಖಲಾದ ಬಳಿಕ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧ ಅಂಶಗಳಿಲ್ಲದಿರುವುದರಿಂದ ಪ್ರಕರಣ ರದ್ದು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು, ಯಡಿಯೂರಪ್ಪ ತನ್ನ ಪುತ್ರಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಕೇಸ್ ದಾಖಲಿಸಿದ್ದರು. ನಂತರದಲ್ಲಿ ದೂರು ದಾರ ಮಹಿಳೆ ಕೆಲ ದಿನಗಳ ಹಿಂದೆ ತೀವ್ರ ಅನಾರೋಗ್ಯದಿಂದ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ತನ್ನ ವಿರುದ್ಧದ ಪೋಕ್ಸೋ ಕೇಸ್ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ