ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ತನ್ನ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಯೋಸಹಜವಾದ ಕೆಲ ಅನಾರೋಗ್ಯ ಸಮಸ್ಯೆಗಳಿವೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನ್ಯಾಯಾಲಯ ಸಿಐಡಿ ಪೊಲೀಸರಿಗೆ ಆದೇಶ ನೀಡಿದೆ.
ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ತನಿಖೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ