Kannada NewsKarnataka NewsLatest
*ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಆದೇಶ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಪ್ರಕರಣದ ತನಿಖೆಯನ್ನು ಸಿಐಡಿಗೆ ಹೆಗಲಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಡಿಜಿ & ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಜೆಯೊಳಗೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾಗಲಿದೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ನಡಿ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ