*ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು; ಮಾಜಿ ಸಿಎಂ ಅವರನ್ನು ವಶಕ್ಕೆ ಪಡಿತಾರಾ? ಗೃಹ ಸಚಿವರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಕಾನೂನು ಪ್ರಕಾರ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಕಳೆದ ರಾತ್ರಿ ಮಹಿಳೆ ದೂರು ಕೊಟ್ಟಿದ್ದಾರೆ. ಕೇಸ್ ದಾಖಲಿಸಿಕೊಳ್ಳಲಾಗಿದೆ. ಕಾನೂನು ಪ್ರಕಾರ ಪೊಲೀಸರು ತನಿಖೆ ನಡೆಸಲಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಆಗಲ್ಲ ಎಂದರು.
ಇದು ಓರ್ವ ಮಾಜಿ ಮುಖ್ಯಮಂತ್ರಿಗೆ ಸಂಬಂಧಿಸಿದ ವಿಷಯ. ಅಗತ್ಯವಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಯಡಿಯೂರಪ್ಪ ಅವರನ್ನು ವಶಕ್ಕೆ ಸಂಬಂಧಿಸಿದಂತೆ ತನಿಖೆ ಮೇಲೆ ನಿರ್ಧಾರವಾಗಲಿದೆ. ಪ್ರಕರಣದ ಬಗ್ಗೆ ಸಿಎಂ, ಡಿಸಿಎಂ ಜೊತೆಗೂ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ಇನ್ನು ಮಹಿಳೆ ಕೈಬರಹದಲ್ಲಿ ದೂರು ನೀಡಿಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ. ಆ ಮಹಿಳೆ ಮಾನಿಸಿಕ ಅಸ್ವಸ್ಥೆ ರೀತಿ ಕಾಣ್ತಾರೆ ಎಂದು ಹೇಳುತ್ತಿದ್ದಾರೆ. ಎಲ್ಲವನ್ನೂ ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ