Latest

ಕೊರೊನಾದಿಂದ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಹಲವರು ಬಲಿಯಾಗಿದ್ದಾರೆ, ಅನೇಕ ಕುಟುಂಬಗಳು ಬೀದಿಪಾಲಾಗುತ್ತಿದ್ದಾರೆ ಜನರ ಸಂಕಷ್ಟವನ್ನು ಮನಗೊಂಡು ರಾಜ್ಯ ಸರ್ಕಾರ ಇದೀಗ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ನಿರ್ಧರಿಸಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕುಟುಂಬದ ಒಬ್ಬರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.

ಇದೇ ವೇಳೆ ಚಿತ್ರರಂಗದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ವಿಧಿವಶರಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದು:ಖ್ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಂತಾಪ ಸೂಚಿಸಿದರು.

ನಾಳೆಯಿಂದಲೇ ಶೈಕ್ಷಣಿಕ ವರ್ಷ ಆರಂಭ – ಅನ್ಭುಕುಮಾರ; ಸಂಜೆಯ ಹೊತ್ತಿಗೆ ಸುರೇಶ ಕುಮಾರ, ಸಿಎಂ ನಿರ್ಧಾರ

Home add -Advt

Related Articles

Back to top button