*ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ; ಮತಾಂಧ ಶಕ್ತಿಯನ್ನು ಆಡಳಿತದ ಭಾಗವನ್ನಾಗಿಸಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊಲೆ, ಹಲ್ಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ನಡೆದಿದೆ. ಸಿದ್ದರಾಮಯ್ಯನವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ನಡೆದುಕೊಂಡರೂ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣಾ ಪ್ರಚಾರ ನಡೆಸುತ್ತಿದ್ದ ನಮ್ಮ ಕಾರ್ಯಕರ್ತನ ಮೇಲೆ ಕಾರು ಹರಿಸಲಾಗಿದೆ. ಕೆರಗೋಡಿನಲ್ಲಿ ಹನುಮಧ್ವಜ ವಿವಾದ ನಡೆಯಿತು. ಪೊಲೀಸರ ಮೂಲಕವೇ ಹನುಮಧ್ವಜ ಕೆಳಗಿಳಿಸಲಾಯಿತು. ರಾಜ್ಯದಲ್ಲಿರುವುದು ಒಂದು ಕ್ರೂರ ಸರ್ಕಾರ ಎಂದು ಕಿಡಿಕಾರಿದರು.
ರಾಜ್ಯದ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಾಸದವಿಲದಾಗಿದೆ. ಜನರಿಗೆ ಕುಡಿಯುವ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಕಿಸಾನ್ ಸಮ್ಮಾನ್ ಯೋಜನೆಗೆ ನೀಡುತ್ತಿದ್ದ ಹನ ನಿಲ್ಲಿಸಿದ್ದಾರೆ. ಸರ್ಕರ ದಿವಾಳಿಯಾಗಿದೆ ಎಂದರು.
ಸಿದ್ದರಾಮಯ್ಯ ಸರ್ಕಾರ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ