Kannada NewsLatest

ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ’ರೇಪ್’ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ರೇಪ್ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಒಂದು ಮಾತಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಿನ್ನೆ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದರು. ಮಾಜಿ ಸ್ಪೀಕರ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಯಾರೇ ಆಗಲಿ ಇಂಥ ಹೇಳಿಕೆಗಳನ್ನು ನೀಡುವುದು ಅಪರಾಧ. ಅದರಲ್ಲೂ ರಮೇಶ್ ಕುಮಾರ್ ಓರ್ವ ಮಾಜಿ ಸ್ಪೀಕರ್, ಬುದ್ಧಿವಂತರೆನಿದ್ಸಿಕೊಂಡವರು. ಅವರು ಇಂಥ ಹೇಳಿಕೆಗಳನ್ನು ನೀಡಿರುವುದು ಖಂಡನೀಯ ಎಂದರು.

ಅನೇಕ ಸಂದರ್ಭಗಳಲ್ಲಿ ದೊಡ್ಡ ದೊಡ್ಡ ಉಪದೇಶ ಕೊಡುವ, ತುಂಬಾ ಬುದ್ಧಿವಂತರೆನಿಸಿಕೊಳ್ಳುವ ರಮೇಶ್ ಕುಮಾರ್ ಈಗ ಇಂಥ ಹೇಳಿಕೆ ಕೊಡುವ ಮೂಲಕ ಇಡೀ ಮಹಿಳಾ ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಮಹಿಳಾ ಕುಲವೇ ತಲೆ ತಗ್ಗಿವಂತೆ ಮಾಡಿರುವುದು ಅಕ್ಷಮ್ಯ. ತಕ್ಷ ಆವರು ಬಹಿರಂಗ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದರು.
ರಮೇಶ್ ಕುಮಾರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button