Latest

*BJPಯಲ್ಲಿ ಯಡಿಯೂರಪ್ಪ ಕಡೆಗಣನೆ; ಸ್ಪಷ್ಟನೆ ನೀಡಿದ ಬಿಎಸ್ ವೈ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂಬ ವಿಪಕ್ಷ ಕಾಂಗ್ರೆಸ್, ಜೆಡಿಎಸ್ ಟೀಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ನನ್ನ ಯಾರೂ ಕಡೆಗಣಿಸಿಲ್ಲ ಎಂದು ಹೇಳಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಈ ಬಗ್ಗೆ ನನಗೆ ಸಂತೃಪ್ತಿಯಿದೆ. ಯಾರೂ ಕೂಡ ನನ್ನನ್ನು ಕಡೆಗಣಿಸಿಲ್ಲ ಸೈಡ್ ಲೈನ್ ಕೂಡ ಮಾಡಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಈಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಕಾಂಗ್ರೆಸ್ ನವರು ತಾವೇ ಮುಖ್ಯಮಂತ್ರಿ ಎಂದು ಕನಸು ಕಾಣುತ್ತಾ ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಧಾನಸಭಾ ಅಧಿವೇಶನ ಬಳಿಕ ನಾಲ್ಕು ಕಡೆಗಳಿಂದ ರಥಯಾತ್ರೆ ನಡೆಸುತ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಮನೆ ಮನೆಗೂ ತಪಿಸುತ್ತೇವೆ ಎಂದು ಹೇಳಿದರು.

Home add -Advt

*ವರುಣಾದಲ್ಲಿ ನಾನೇ ಅಭ್ಯರ್ಥಿ ಎಂದ ಡಾ.ಯತೀಂದ್ರ ಸಿದ್ದರಾಮಯ್ಯ*

https://pragati.taskdun.com/varunayatindra-siddaramaiahcontestingvidhanasabha-election/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button