
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರು ಚುನಾವಣೆಗೆ ಸ್ಪರ್ಧಿಸಲ್ಲ, ಉಳಿದಂತೆ ಪಕ್ಷ ಸಂಘಟನೆ ಮತ್ತಿತರ ಚುಟುವಟಿಕೆಯಲ್ಲಿ ಸಕ್ರಿಯರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. ಹೈಕಮಾಂಡ್ ನೇರವಾಗಿಯೇ ಈ ಬಾರಿ ಚುನಾವಣೆಗೆ ನಿಲ್ಲದಂತೆ ಅವರಿಗೆ ಸೂಚಿಸಿತ್ತು ಎಂದಿದ್ದಾರೆ.
ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿರುವಂತೆ ಹೇಳಿತ್ತು. ಅದರಂತೆ ಅವರು ಪಕ್ಷದಲ್ಲಿ ಸಕ್ರಿಯರಾಗಿರಲಿದ್ದಾರೆ. ಪಕ್ಷ ತನಗೆ ಎಲ್ಲವನ್ನೂ ನೀಡಿದೆ. ಹೆಚ್ಚಿನದೇನೂ ಬಯಸಲ್ಲ ಎಂದು ಅವರೇ ಹೇಳಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ