
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ