Latest

*ಬಿಜೆಪಿಯಲ್ಲಿ ನನ್ನದೇ ಆದ ಶಕ್ತಿಯಿದೆ; ಮಾಜಿ ಸಿಎಂ ಯಡಿಯೂರಪ್ಪ ಖಡಕ್ ಮಾತು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಕಚೇರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡದೇ ರಾಜ್ಯ ಬಿಜೆಪಿ ನಾಯಕರು ರಾಜಾಹುಲಿಯನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಬರುವ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರನ್ನು ಆಹ್ವಾನಿಸದಿರುವುದು ಯಡಿಯೂರಪ್ಪ ಅವರ ಮುನಿಸಿಗೆ ಕಾರಣವಾಗಿತ್ತು. ಬಿಜೆಪಿಯಲ್ಲಿ ಭಿನ್ನಮತ ಕುರಿತು ತೀವ್ರ ಚರ್ಚೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ನಾಯಕರು ಯಡಿಯೂರಪ್ಪನವರಿಗೆ ಕರೆ ಮಾಡಿ ಮನವೊಲಿಸುವ ಮೂಲಕ ಘಟನೆಗಳಿಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.

ಎಲ್ಲಾ ಬೆಳವಣಿಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇಂದಿನ ಕಾರ್ಯಕ್ರಮಕ್ಕೆ ನಾನು ಹೋಗುವ ಸ್ಥಿತಿಯಲ್ಲಿರಲಿಲ್ಲ. ಹಾಗಾಗಿ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದೇ. ಆದರೆ ಕೊಪ್ಪಳದಲ್ಲಿನ ಕಾರ್ಯಕ್ರಮಕ್ಕೆ ಬರಲೇ ಬೇಕು ಎಂದು ಒತ್ತಾಯಿಸಿದ್ದಾರೆ. ಹಾಗಾಗಿ ಹೋಗುತ್ತಿದ್ದೇನೆ. ಕೊಪ್ಪಳಕ್ಕೆ ಜೆ.ಪಿ.ನಡ್ಡಾ ಆಗಮಿಸುತ್ತಿದ್ದಾರೆ. ಹಾಗಾಗಿ ಹೋಗುತ್ತಿದ್ದೇನೆ ಎಂದರು.

Home add -Advt

ಸಾರ್ವಜನಿಕ ಕಾರ್ಯಕ್ರಮಕ್ಕೆ ನನ್ನನ್ನು ಯಾರೂ ಕರೆಯಬೇಕಿಲ್ಲ. ಅದು ನನ್ನ ಕರ್ತವ್ಯ ನಾನು ಹೋಗುತ್ತೇನೆ. ಬಿಜೆಪಿಯಲ್ಲಿ ನನ್ನದೇ ಆದ ಶಕ್ತಿ ಇದೆ. ಪಕ್ಷ ಬಲ ಪಡಿಸಿದ್ದೇನೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇದು ರಾಜ್ಯದ ಜನತೆಗೂ ಗೊತ್ತು. ಅದನ್ನೇ ಮುಂದುವರೆಸಿದ್ದೇನೆ. ಯಾವುದೇ ರೀತಿ ಭಿನ್ನಾಭಿಪ್ರಾಯಗಳೂ ನನ್ನಲ್ಲಿಲ್ಲ. ಯಡಿಯೂರಪ್ಪರನ್ನು ಮುಗಿಸುತ್ತೇವೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂದು ಖಡಕ್ ಆಗಿ ಹೇಳಿದರು.

ಸರ್ಕಾರದ ಕಾರ್ಯಕ್ರಮವಾದರೆ ನಾನು ಹೋಗುವುದು ಸರಿಯಲ್ಲ. ಇನ್ನು ಬಿಜೆಪಿಯಲ್ಲಿ ಯಾವುದೇ ಭಿನ್ನಮತವೂ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಭೀಕರ ಕಾರು ಅಪಘಾತ: ಅಪಾಯದಿಂದ ಪಾರಾದ ಕರವೇ ಜಿಲ್ಲಾಧ್ಯಕ್ಷ

https://pragati.taskdun.com/terrible-car-accident-krv-district-president-escaped-unharmed/

Related Articles

Back to top button