
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯಿತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ. ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಸ್ವಾಗತಿಸುತ್ತೇನೆ. ಅವರ ಭಾವನೆಗೆ ನನ್ನ ಬೆಂಬಲವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗೆ ನನ್ನ ಬೆಂಬಲವಿದೆ. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಲಿಂಗಾಯತ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಆದರೆ ಸಮುದಾಯದವರನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸಲಾಗುತ್ತಿದೆ. ಈ ಬಗ್ಗೆ ಶಾಮನೂರು ಅವರಿಗೆ ಕಳಕಳಿಯಿದೆ. ಎಲ್ಲ ವೀರಶೈವ ಲಿಂಗಾಯತ ಮುಖಂಡರಲ್ಲಿಯೂ ಇದೆ ತಳಮಳ ಇದೆ. ಶಾಮನೂರು ಅವರ ಹೇಳಿಕೆಯನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಈ ಸಮಯದಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ಜಾಗೃತರಾಗಬೇಕು, ಒಟ್ಟಾಗಬೇಕು ಎಂದು ಕರೆ ನೀಡುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ