ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ವೀರಶೈವ ಲಿಂಗಾಯಿತ ಮುಖಂಡರಲ್ಲಿ ಕೈ ಮುಗಿದು ಮನವಿ ಮಾಡುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ನನ್ನ ಬಹಳ ವರ್ಷಗಳ ಕನಸು ನನಸಾಗಿದೆ. ರಾಜ್ಯದ ಅಭಿವೃದ್ಧಿಗೆ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.
ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದೇನೆ. ಆದರೆ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದರು.
ವೀರಶೈವ ಲಿಂಗಾಯಿತ ಮತಗಳು ಬಿಜೆಪಿಯಿಂದ ವಿಮುಖವಾಗುತ್ತವೆ ಎಂಬ ಮಾತು ಕೇಳಿಬರುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಆ ರೀತಿ ಆಗುವುದಿಲ್ಲ. ಇಷ್ಟು ವರ್ಷಗಳಕಾಲ ನನಗೆ ದೊಡ್ಡಮಟ್ಟದಲ್ಲಿ ಸಹಕಾರ ನೀಡಿದ್ದೀರಿ. ಹಾಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ವೀರಶೈವ ಲಿಂಗಾಯಿತ ಮುಖಂಡರಲ್ಲಿ ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಹೇಳಿದರು. ಅಪಾರ್ಥಮಾಡಿಕೊಳ್ಳಬಾರದು ನನಗೆ 80 ವರ್ಷವಾಗಿದೆ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ವೀರಶೈವ ಲಿಂಗಾಯಿತ ಸಮುದಾಯ ನಮಗೆ ಬೆಂಬಲ ಕೊಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ವಿನಂತಿಸಿದರು.
*7ನೇ ವೇತನ ಆಯೋಗ; ಸಿಎಂ ಧೋರಣೆಯಿಂದ ಸರ್ಕಾರಿ ನೌಕರರಿಗೆ ಬೇಸರ*
https://pragati.taskdun.com/7th-pay-commissionstate-govt-employeesprotestmarch-1st/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ