Latest

ಯಡಿಯೂರಪ್ಪ ರಾಜೀನಾಮೆ; ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಬೊಮ್ಮಲಾಪುರ ಗ್ರಾಮದ ರವಿ (35) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನಂತೆ. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ತೀವ್ರವಾಗಿ ಬೇಸರಗೊಂಡಿದ್ದ ರವಿ ಬಳಿಕ ನೇಣಿಕೆ ಶರಣಾಗಿದ್ದಾರೆ.

Home add -Advt

ಅಭಿಮಾನಿ ಆತ್ಮಹತ್ಯೆಗೆ ಬೇಸರ ವ್ಯಕ್ತಪಡಿಸಿರುವ ಯಡಿಯೂರಪ್ಪ, ಕೈಮುಗಿದು ವಿನಂತಿಸುವೆ ಅಭಿಮಾನ ಅತಿರೇಕಕ್ಕೆ ಹೋಗಬಾರದು. ರವಿ ಎಂಬುವವರು ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ತಂದಿದೆ. ರಾಜಕಾರಣದಲ್ಲಿ ಏರಿಳಿತ ಸಹಜ. ಇದಕ್ಕಾಗಿ ಪ್ರಣಾರ್ಪಣೆ ಮಾಡಿಕೊಳ್ಳುವುದು ಸರ್ವತಾ ಒಪ್ಪಲಾಗದು. ನಿಮ್ಮ ಕುಟುಂಬಕ್ಕಾಗುವ ನಷ್ಟವನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ. ರವಿ ಕುಟುಂಬದ ನೋವಿನೊಂದಿಗೆ ನಾನಿದ್ದೇನೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

Related Articles

Back to top button