Latest

*ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತ; ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ; ಮಾಜಿ.ಸಿಎಂ ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಸೋತು ಮನೆಗೆ ಹೋಗುವುದು ನಿಶ್ಚಿತ. ವಿ.ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ವಿ.ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸಿದ್ದರಾಮಯ್ಯ ವರುಣಾದಲ್ಲಿಯೇ ಇದ್ದರೂ ಸೋಲುವುದು ಖಚಿತ ಎಂದರು.

Home add -Advt

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. 130-135 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಈ ಬಾರಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

https://pragati.taskdun.com/it-raidmysoremango-tree1-crore-foundk-subrhmanya-rai/

Related Articles

Back to top button