Latest

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಸದನದಲ್ಲಿ ಅಬ್ಬರಿಸಿದ ಯಡಿಯೂಪ್ಪ

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ಕಾಂಗ್ರೆಸ್ ನಾಯಕರು ತಾವು ಮತ್ತೆ ಅಧಿಕಾರಕ್ಕೆ ಬಂದುಬಿಡುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ನಾವು ಕಾಂಗ್ರೆಸ್ ಮುಕ್ತ ದೇಶ, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿಯೂ ಮರುಕಳಿಸಲಿದೆ. ಸಿದ್ದರಾಮಯ್ಯನವರೇ ನೀವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ನಿಮ್ಮನ್ನು ಶಾಶ್ವತವಾಗಿ ವಿಪಕ್ಷ ಸ್ಥಾನದಲ್ಲಿಯೇ ಕೂರಿಸುತ್ತೇವೆ ಎಂದರು.

Home add -Advt

ಸಿದ್ದರಾಮಯ್ಯನವರೇ ನೀವು ವಿಪಕ್ಷ ನಾಯಕನಾಗಿ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತೆ. ಕಾಂಗ್ರೆಸ್ ಸಂಪೂರ್ಣ ಧೂಳಿಪಟವಾಗುತ್ತಲ್ಲ ಎಂಬ ನೋವು ನನಗಿದೆ, ಆದರೆ ಸಿದ್ದರಾಮಯ್ಯನವರಿಗೆ ಇದೆಯೋ ಇಲ್ವೋ ಗೊತ್ತಿಲ್ಲ. ಸಧ್ಯಕ್ಕೆ ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಉಸಿರಾಡುತ್ತಿದೆ. ಮುಂದಿನ ದಿನಗಳಲ್ಲಿ ಅದೂ ಕೂಡ ಇಲ್ಲದಾಗುತ್ತೆ ಎಂದು ಕಾಲೆಳೆದರು.

ಅಧಿವೇಶನ ಮುಗಿಯುತ್ತಿದ್ದಂತೆ ನಾವು ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ. 135ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಸಿಎಂ ಕೆ.ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

Related Articles

Back to top button