Latest

ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ  ಏರ್ ಪೋರ್ಟ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಭೇಟಿಯಾದ ಮಾಜಿ ಸಿಎಂ ಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ, ಏರ್ ಪೋರ್ಟ್ ನ ವಿಐಪಿ ಲಾಂಚ್ ನಲ್ಲಿ ಕುಳಿತು ಚರ್ಚೆ ನಡೆಸಿದರು. ಕೆಲಕಾಲ ಇಬ್ಬರೂ ಮಾತುಕತೆ ನಡೆಸಿದರು.

ಯಡಿಯೂರಪ್ಪ ಇಂದು ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಏರ್ ಪೋರ್ಟ್ ಗೆ ತೆರಳಿದ್ದರು. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹುಬ್ಬಳ್ಳಿಗೆ ಹೋಗಲು ಏರ್ ಪೋರ್ಟ್ ಗೆ ಬಂದಿದ್ದಾರೆ. ಹೀಗಾಗಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು  ವಿಮಾನನಿಲ್ದಾಣದಲ್ಲಿ ಭೇಟಿಯಾಗಿದ್ದು, ಕೆಲ ಕಾಲ ಮಾತುಕತೆ ನಡೆಸಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಬ್ಬರು ದಿಗ್ಗಜರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಶಾಸಕರ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾದ ಮಹಿಳಾಧಿಕಾರಿ

Home add -Advt

Related Articles

Back to top button