ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ Z+ ಭದ್ರತೆ ನೀಡಿದೆ.
ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರಿಗೆ ಒದಗಿಸಲಾಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಇದೀಗ ಕೇಂದ್ರ ಗೃಹ ಇಲಾಖೆ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಯಡಿಯೂರಪ್ಪನವರ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಭದ್ರತೆ ಒದಗಿಸಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರ ಭದ್ರತೆಗಾಗಿ ಒಟ್ಟು 33 Z ಕೆಟಗರಿಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ