ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಬಿ ಎಸ್ ಯಡಿಯೂರಪ್ಪನವರು ಮುಂದಿನ ಮೂರುವರೆ ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಬಳಿಕ ಚುನಾವಣೆಯಿಂದ ನಿವೃತ್ತಿ ಪಡೆಯಲಿದ್ದಾರೆ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಾಭಾಕರ್ ಭಟ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸದೊಂದು ಚರ್ಚೆಯನ್ನು ಹುಟ್ಟುಹಾಕಿದೆ.
ತಿಂಗಳ ಹಿಂದೆ ನಾನು ಯಡಿಯೂರಪ್ಪ ಅವರನ್ನು ಬೇಟಿಯಾಗಿದ್ದೆ. ಅವರೇ ಸಂತೋಷದಿಂದ ನನಗೆ ಹೇಳಿದ ಮಾತಿದು. ನಾನು ಮೂರುವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ರೈತರ, ರ್ದುಬಲ ವರ್ಗಗಳ ಅಭಿವೃದ್ದಿಗೆ ಚೆನ್ನಾಗಿ ಕೆಲಸ ಮಾಡುತ್ತೇನೆ. ಮತ್ತೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪಕ್ಷ ಹಾಗೂ ಜನ ನನಗೆ ಎಲ್ಲ ರೀತಿಯ ಜವಾಬ್ದಾರಿ ಹಾಗೂ ಅಧಿಕಾರ ನೀಡಿದ್ದಾರೆ. ಮೂರುವರೆ ವರ್ಷದ ಬಳಿಕ ಪಕ್ಷಕ್ಕೋಸ್ಕರ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆಂದು ಹೇಳಿದ್ದಾರೆ ಎಂದರು.
ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ, ಯಡಿಯೂರಾಪ್ಪ ನಿಜವಾದ ಮಣ್ಣಿನ ಮಗ. ರೈತನ ಮಗ.ಇಡೀ ದೇಶದಲ್ಲಿ ರೈತರ ಬಜೆಟ್ ತಂದವರು ಯಾರದರೂ ಇದ್ದರೆ ಅದು ಯಡಿಯೂರಪ್ಪ ಮಾತ್ರ. ಕಳೆದ 60 ವರ್ಷದಲ್ಲಿ ಯಾರು ಮಾಡದ ಕೆಲಸವನ್ನು ಯಡಿಯೂರಪ್ಪ ರೈತರ ಪರವಾಗಿ ಬಜೆಟ್ ಮಾಡಿದರು ಎಂದು ಪ್ರಭಾಕರ್ ಭಟ್ ಶ್ಲಾಘಿಸಿದ್ದಾರೆ.
ಒಟ್ಟಾರೆ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆ ಎಂಬ ಪ್ರಭಾಕರ ಭಟ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ