ಕೊರೊನಾ ಭೀತಿ: ಆರೋಗ್ಯ ಇಲಾಖೆಯಿಂದ ತೀವ್ರ ನಿಗಾ: ಶ್ರೀರಾಮುಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್‌ ಸೋಂಕಿನ ಬಗ್ಗೆ ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಸೋಂಕು ಹರಡಂತೆ ತೀವ್ರ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿಯೇ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಕೊರೊನಾ ವೈರಸ್‌ ಹರಡದಾಂತೆ ನಿಗಾ ವಹಿಸಿದೆ ಹಾಗೂ ಎಲ್ಲಾ ತರಹದ ಸಿದ್ದತೆಗಳನ್ನು ಕೈಗೊಂಡಿದೆ. ನಾಗರಿಕರು ಏನಾದರೂ ಸಮಸ್ಯೆ ಇಲ್ಲವೇ ಸಂದೇಹಗಳಿದ್ದಲ್ಲಿ ಆತಂಕಕ್ಕೆ ಒಳಗಾಗದೆ, 104 ಆರೋಗ್ಯ ಸಹಾಯವಾಣಿಗೆ ಕರೆ ಮಾಡಿ ಬಗೆಹರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಬಾಧಿತ ದೇಶಗಳಿಂದ ಬಂದ 468 ಪ್ರಯಾಣಿಕರಲ್ಲಿ 284 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಮನೆಗಳಲ್ಲಿ ಹಾಗೂ ಕೆಲವರನ್ನು ಪ್ರತ್ಯೇಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪರೀಕ್ಷೆಗೂ ಒಳಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 39391 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. 238 ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದೆ. ಎಲ್ಲವೂ ನೆಗೆಟಿವ್‌ ಎಂದು ಬಂದಿದೆ. 240 ರಕ್ತ ಮಾದರಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಸಚಿವರು ಮಾಹಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button